October 14, 2026
Wednesday, October 14, 2026
spot_img

GBAಗೆ ಒಂದು ವರ್ಷದ ಸಂಭ್ರಮ: ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಿ ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

 ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ರಚನೆಯಾಗಿ ಇಂದಿಗೆ ಒಂದು ವರ್ಷ ತುಂಬಿದೆ. ಆಡಳಿತ ವಿಕೇಂದ್ರೀಕರಣ ಹಾಗೂ ಜನಸ್ನೇಹಿ ಆಡಳಿತ ನೀಡುವ ಸಲುವಾಗಿ ಒಂದು ವರ್ಷದ ಹಿಂದೆ ಈ 5 ನಗರ ಪಾಲಿಕೆಗಳನ್ನು ನಿರ್ಮಿಸಲಾಯಿತು. ಇದರಿಂದ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಉತ್ತಮ ಯೋಜನೆ ರೂಪಿಸಲು ಸಾಧ್ಯವಾಗುತ್ತಿದ್ದು, ಈ ಅಭಿವೃದ್ಧಿ ಪಯಣವು ಇನ್ನಷ್ಟು ವೇಗ ಪಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ, ಒಂದೇ ಸಾರಥ್ಯದ ಮಿತಿಗಳನ್ನು ಮೀರಿ, ನಗರವನ್ನು ಐದು ಸ್ವತಂತ್ರ ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಈ ಹೊಸ ಮಾದರಿಯಿಂದಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ವೇಗವಾಗಿ ಸ್ಪಂದಿಸಲು ಸಾಧ್ಯವಾಗುತ್ತಿದೆ. ಇಡೀ ಬೆಂಗಳೂರು ನಗರದ ವ್ಯವಸ್ಥಿತ ಬೆಳವಣಿಗೆಗಾಗಿ ಜಿಬಿಎ ಅಡಿಯಲ್ಲಿ ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:

ಈ ಹೊಸ ಆಡಳಿತ ಚೌಕಟ್ಟು ನಮಗೆ ಉತ್ತಮವಾದ ಯೋಜನೆ ರೂಪಿಸಲು ಮತ್ತು ವೇಗವಾಗಿ ಕೆಲಸ ಮಾಡಲು ದೊಡ್ಡ ಅವಕಾಶ ನೀಡಿದೆ. ಸುಸ್ಥಿರ ಹಾಗೂ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಜ್ಜಾದ ‘ಗ್ರೇಟರ್ ಬೆಂಗಳೂರು’ ನಿರ್ಮಾಣದತ್ತ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಹಾಗಾಗಿ ಭವಿಷ್ಯದ ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಿ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Must Read