ಕೋವಿಡ್ ಲಸಿಕೆ ಅಭಿಯಾನಕ್ಕೆ ಒಂದು ವರ್ಷ: ನಳಿನ್‍ಕುಮಾರ್ ಕಟೀಲ್ ಅಭಿನಂದನೆ

ಹೊಸದಿಗಂತ ವರದಿ,ಮಂಗಳೂರು:

ಕೊರೋನಾ ವಿರುದ್ಧ ಭಾರತದಲ್ಲಿ ನಡೆಸಲಾಗುತ್ತಿರುವ ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವು ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತ್ವರಿತವಾಗಿ ಲಸಿಕೆ ಉತ್ಪಾದನೆಗೆ ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದ ಮತ್ತು ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‍ಕುಮಾರ್ ಕಟೀಲು ತಿಳಿಸಿದ್ದಾರೆ.
ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದಲ್ಲಿ ಭಾರತದ ಅರ್ಹ ಜನಸಂಖ್ಯೆಯ 92% ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ದೇಶದ 70% ರಷ್ಟು ಅರ್ಹ ಜನಸಂಖ್ಯೆ ಸಂಪೂರ್ಣ ಲಸಿಕೆ ಪಡೆದಿದ್ದಾರೆ. ಇದು ನಿಜಕ್ಕೂ ಮಹತ್ವದ ಕಾರ್ಯ. ಇದರಿಂದಾಗಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎಂದು ಅವರು ವಿವರಿಸಿದ್ದಾರೆ.
ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದಲ್ಲಿ ಇದುವರೆಗೆ 156.76 ಕೋಟಿಗೂ ಅಧಿಕ ಡೋಸ್ ಲಸಿಕೆ ವಿತರಿಸಲಾಗಿದೆ. ಭಾರತದ ಲಸಿಕಾ ಅಭಿಯಾನವು ಜಗತ್ತಿನ ಅನೇಕ ಪ್ರಮುಖ ದೇಶಗಳಿಗಿಂತ ವೇಗವಾಗಿ ನಡೆಯುತ್ತಿದೆ. ಭಾರತದಲ್ಲಿ ಒಂದು ವರ್ಷದಲ್ಲಿ ದೈನಂದಿನ ಸರಾಸರಿ 4.26 ಮಿಲಿಯನ್ ಜನರಿಗೆ ಲಸಿಕೆ ನೀಡಲಾಗಿದೆ. ಇದಕ್ಕಾಗಿ ಪ್ರಧಾನಿಯವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!