ಅಲ್ಕಾ ಮಿತ್ತಲ್- ಒಎನ್‌ಜಿಸಿ ಮುನ್ನಡೆಸುತ್ತಿರುವ ಮೊದಲ ಮಹಿಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಸರಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಕಂಪನಿಯ ಹಂಗಾಮಿ ಅಧ್ಯಕ್ಷೆ ಮತ್ತು ವ್ಯವಸ್ಥಾಪಕ ನಿರ್ದೇಶಕಿಯಾಗಿ ಅಲ್ಕಾ ಮಿತ್ತಲ್ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ.

ಡಿ. 31ರಂದು ವಯೋ ನಿವೃತ್ತರಾದ ಸುಭಾಷ್ ಕುಮಾರ್ ಅವರ ನಂತರ, ಮಿತ್ತಲ್ ಅಧಿಕಾರ ವಹಿಸಿಕೊಳ್ಳುತ್ತಾರೆ. ಇವರು ದೇಶದ ಅತಿದೊಡ್ಡ ತೈಲ ಮತ್ತು ಅನಿಲ ಉತ್ಪಾದಕರ ಮುಖ್ಯಸ್ಥರಾಗಿರುವ ಮೊದಲ ಮಹಿಳೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಹೊರಡಿಸಿದ ಆದೇಶದಲ್ಲಿ, ಸಚಿವ ಸಂಪುಟದ ನೇಮಕಾತಿ ಸಮಿತಿ (ಎಸಿಸಿ)ಯು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ (ಸಿಎಂಡಿ) ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಅಲ್ಕಾ ಮಿತ್ತಲ್‌ಗೆ ಹಸ್ತಾಂತರಿಸಲು ನಿರ್ಧರಿಸಿದೆ.

ಅಲ್ಕಾ ಮಿತ್ತಲ್ 2022 ಜನವರಿ 1ರಿಂದ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಒಎನ್‌ಜಿಸಿಯ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!