ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.
ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31,2023 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ. ಆನ್‌ಲೈನ್ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ / ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.
ಕೋರ್ಸ್ ಅನುಸಾರ ಪ್ರೋತ್ಸಾಹಧನ ಮೊತ್ತ ಹೀಗಿದೆ:
ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ : 20,000 ಪದವಿ : 25,000 ಯಾವುದೇ ಸ್ನಾತಕೋತ್ತರ ಪದವಿ : 30,000 ಅಗ್ರಿಕಲ್ಚರ್, ಇಂಜಿನಿಯರ್, ವೆಟರಿನರಿ, ಮೆಡಿಷನ್: 35,000
ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sw.kar.nic.in/index.aspx ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.