ಆನ್‌ಲೈನ್‌ ಬೆಟ್ಟಿಂಗ್‌ ಚಟ! ಸಾಲ ಮಾಡಿ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾದ ಯುವಕ

ಹೊಸದಿಗಂತ ವರದಿ ದಾವಣಗೆರೆ: 

ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ವರದಿಯಾಗಿದೆ.

ಇಲ್ಲಿನ ಸರಸ್ವತಿ ಬಡಾವಣೆಯ ನಿವಾಸಿ ಶಶಿಕುಮಾರ (25 ವರ್ಷ) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ಮುನ್ನ 6 ಪುಟಗಳ ಡೆತ್ ನೋಟ್ ಬರೆದು, ಸೆಲ್ಫೀ ವೀಡಿಯೋ ಮಾಡಿದ್ದಾನೆ.

ಆನಲೈನ್ ಗೇಮಿಂಗ್ ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದೇನೆ. ಆದರೆ ಇದೇ ಆನಲೈನ್ ಗೇಮಿಂಗ್ ನಲ್ಲಿ 19 ಕೋಟಿ ರೂ.ಗಳಿಗೂ ಅಧಿಕ ಹಣ ನಾನು ಗೆದ್ದಿದ್ದರೂ ಆನಲೈನ್ ಗೇಮ್ ನಡೆಸುವವರು ನನಗೆ ಹಣ ಕೊಟ್ಟಿಲ್ಲ.

ಈ ಬಗ್ಗೆ ವಿದ್ಯಾನಗರ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇದರಿಂದಾಗಿ ಮಾನಸಿಕವಾಗಿ ತೀವ್ರ ಖಿನ್ನತೆಗೆ ಒಳಗಾಗಿದ್ದೇನೆ. ಆನ್ಲೈನ್ ಗೇಮಿಂಗ್ ಹಿಂದಿರುವ ಕಾಣದ ಕೈಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ತನ್ನಂತೆಯೇ ಮುಂದಿನ ಪೀಳಿಗೆಗೆ ಸಮಸ್ಯೆ ಆಗದಿರಲಿ. ಆನ್ಲೈನ್ ಗೇಮಿಂಗ್ ದಂಧೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂಬುದಾಗಿ ಶಶಿಕುಮಾರ ಡೆತ್ ನೋಟ್ ಬರೆದಿದ್ದು, ಸೆಲ್ಫೀ ವೀಡಿಯೋದಲ್ಲೂ ತನ್ನ ಹೇಳಿಕೆ ರೆಕಾರ್ಡ್ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!