Friday, November 14, 2025

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: SIT ವಿಚಾರಣೆ ಬಳಿಕ ಕ್ಷಮೆಯಾಚಿಸಿದ ನಟ ಪ್ರಕಾಶ್ ರಾಜ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಇಂದು ಹಾಜರಾದರು.

ಜಾರಿ ನಿರ್ದೇಶನಾಲಯ (ಇ.ಡಿ.) ಈ ಹಿಂದೆ ಬೆಟ್ಟಿಂಗ್ ಆ್ಯಪ್ ಹಗರಣದ ಬಗ್ಗೆ ತನಿಖೆ ನಡೆಸಿತ್ತು. ಹಗರಣದಲ್ಲಿ ತಮ್ಮದು ಯಾವುದೇ ಪಾತ್ರವಿಲ್ಲ ಎಂದು ಪ್ರಕಾಶ್ ರಾಜ್ ತಿಳಿಸಿದರು. 2016 ರಲ್ಲಿ ಬೆಟ್ಟಿಂಗ್ ಇನ್ನೂ ಪ್ರಾರಂಭವಾಗಿರಲಿಲ್ಲ. ತಾವು ಒಂದು ಆ್ಯಪ್ ಬಗ್ಗೆ ಜಾಹೀರಾತಿನಲ್ಲಿ ಮಾತ್ರ ಕಾಣಿಸಿಕೊಂಡಿದ್ದೆ. ಅದು ಬೆಟ್ಟಿಂಗ್ ಆ್ಯಪ್ ಎಂದು ತಿಳಿದ ನಂತರ ಆ ಜಾಹೀರಾತಿನಿಂದ ಹಿಂದೆ ಸರಿದಿದ್ದಾಗಿದೆ. ಆದರೂ ತಪ್ಪಾಗಿದೆ. ಆದ್ದರಿಂದ ನಾನು ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದರು.

ವಿಚಾರಣೆಯ ವೇಳೆ ನಾನು ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳು, ದಾಖಲೆಗಳು ಮತ್ತು ಬ್ಯಾಂಕ್ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಒದಗಿಸಿದ್ದೇನೆ. ಬೆಟ್ಟಿಂಗ್ ಆ್ಯಪ್​ಗಳು ಮತ್ತು ಗೇಮಿಂಗ್ ಆ್ಯಪ್‌ಗಳಲ್ಲಿ ಹೂಡಿಕೆ ಮಾಡುವ ಮೂಲಕ ಅನೇಕ ಯುವಕರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅವರ ಕುಟುಂಬಗಳು ಬಳಲುತ್ತಿವೆ. ಕಠಿಣ ಪರಿಶ್ರಮ ಮಾತ್ರ ಫಲ ನೀಡುತ್ತದೆ. ಕಷ್ಟಪಟ್ಟು ದುಡಿದರೆ ಮಾತ್ರ ಹಣ ಬರುತ್ತದೆ. ಆದ್ದರಿಂದ ನಾವೆಲ್ಲರೂ ದುಡಿಯೋಣ. ದಯವಿಟ್ಟು ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿ. ಭವಿಷ್ಯದಲ್ಲಿ ನಾನು ಅಂತಹ ತಪ್ಪನ್ನು ಮಾಡುವುದಿಲ್ಲ ಎಂದು ಪ್ರಕಾಶ್ ರಾಜ್ ಸ್ಪಷ್ಟನೆ ನೀಡಿದರು.

error: Content is protected !!