Sunday, December 3, 2023

Latest Posts

ಆನ್‌ಲೈನ್ ಬೆಟ್ಟಿಂಗ್ ಪ್ರಕರಣ: ನಟ ರಣಬೀರ್ ಕಪೂರ್ ಗೆ ಇಡಿ ಸಮನ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಅಕ್ಟೋಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಹಲವಾರು ಬಾಲಿವುಡ್ ನಟರು ಮತ್ತು ಗಾಯಕರ ಮೇಲೆ ಇಡಿ ನಿಗಾ ಇಟ್ಟಿದೆ.

ಈ ವರ್ಷದ ಫೆಬ್ರವರಿಯಲ್ಲಿ ಯುಎಇಯಲ್ಲಿ ನಡೆದ ಮಹದೇವ್ ಪ್ರಮೋಟರ್ ಸೌರಭ್ ಚಂದ್ರಕರ್ ಅವರ ಮದುವೆ ಮತ್ತು ಸಕ್ಸೆಸ್ ಪಾರ್ಟಿಯಲ್ಲಿ ಹಾಜರಾಗಿದ್ದವರ ಬಗ್ಗೆ ಇಡಿ ಪರಿಶೀಲಿಸುತ್ತಿದೆ .

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!