ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಆ್ಯಪ್ಗಳಿಗೆ ಶೀಘ್ರದಲ್ಲೇ ಹೊಸ ಮಾನದಂಡ ತರಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ಗೆ ಕಡಿವಾಣ ಹಾಕಲು ಹೊಸ ಕಾನೂನು ತರುವ ಬಗ್ಗೆ ಚರ್ಚೆ ನಡೆದಿದೆ. ಜನರನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುವುದರ ಬಗ್ಗೆ ಸಭೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಹೆಚ್ಚುವರಿ ಕಾಯ್ದೆಗಳನ್ನ ಸೇರಿಸುವ ಬಗ್ಗೆ ಚರ್ಚೆ ನಡೆದಿದೆ. ಗೇಮಿಂಗ್ ಇಂಡಸ್ಟ್ರಿ ಮತ್ತು ಸಾರ್ವಜನಿಕರು, ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯಿಂದ ಸಲಹೆ ಪಡೆದು ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.