ದೇಶದಲ್ಲಿ ಆನ್‌ಲೈನ್ ಗೇಮಿಂಗ್ ಸ್ವಚ್ಛಂದಕ್ಕೆ ಶೀಘ್ರವೇ ಬೀಳಲಿದೆ ಲಗಾಮು??

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಮಾಜದಲ್ಲಿ ದುಷ್ಪರಿಣಾಮ ಬೀರುತ್ತಿರುವ ಆನ್‌ಲೈನ್ ಗೇಮಿಂಗ್ ಮೇಲೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ.ಈ ಬಗ್ಗೆ ಶೀಘ್ರದಲ್ಲೇ ಹೊಸ ಕಾನೂನು ಅಥವಾ ನಿಯಂತ್ರಣಗಳನ್ನು ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಎಲ್ಲಾ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರೊಂದಿಗೆ ಸಭೆ ಯಲ್ಲಿ ಆನ್‌ಲೈನ್ ಗೇಮಿಂಗ್ ಸಮಾಜದ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ಪ್ರತಿಯೊಂದು ರಾಜ್ಯವೂ ಗಂಭೀರ ಕಾಳಜಿಯನ್ನು ತೋರಿಸಿದೆ. ಆನ್‌ಲೈನ್ ಗೇಮಿಂಗ್ ಪರಿಣಾಮ ಇಂದು ಜನರು ಸಾಮಾಜಿಕ ನಿಯಮಗಳಿಗೆ ಒಳಪಡದೆ ವಿಲಕ್ಷಣ ನಡವಳಿಕೆ ಪ್ರದರ್ಶಿಸುತ್ತಿದ್ದಾರೆ, ಇದು ಸಮಾಜದ ಸಾಮರಸ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದ ಅವರು, ಈ ಬಗ್ಗೆ ಸಮಾಲೋಚನೆ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!