ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ಆನ್‌ಲೈನ್ ದೋಖಾ: ಪೊಲೀಸರ ಬಲೆಗೆ ಬಿದ್ದ ಖದೀಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮುರುಡೇಶ್ವರ ದೇವಾಲಯದ ಹೆಸರನ್ನು ದುರುಪಯೋಗಪಡಿಸಿಕೊಂಡು ಆನ್‌ಲೈನ್‌ನಲ್ಲಿ ನಕಲಿ ಲಕ್ಕಿ ಡ್ರಾ ದಂಧೆ ನಡೆಸುತ್ತಿದ್ದ ಬೃಹತ್ ಜಾಲವನ್ನು ಮುರುಡೇಶ್ವರ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೀದರ್ ಮೂಲದ ನರಸಿಂಗ್ ವೆಂಕಟರಾವ್ ತಗರಖೇಡೆ ಎಂಬ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಂಚನೆಯ ಜಾಲ: ಬಂಧಿತ ಆರೋಪಿ ನರಸಿಂಗ್ ವೆಂಕಟರಾವ್, ಮುರುಡೇಶ್ವರ ದೇವಸ್ಥಾನದ ಹೆಸರನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಭಿತ್ತಿಪತ್ರಗಳನ್ನು ಸೃಷ್ಟಿಸುತ್ತಿದ್ದ. “ಮುರುಡೇಶ್ವರ ದೇವಸ್ಥಾನದ ಲಕ್ಕಿ … Continue reading ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ಆನ್‌ಲೈನ್ ದೋಖಾ: ಪೊಲೀಸರ ಬಲೆಗೆ ಬಿದ್ದ ಖದೀಮ!