ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯ ಇರುವುದು ಕಾಂಗ್ರೆಸ್‌ಗೆ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ದೇಶದ ಪ್ರಧಾನಿ ಆಗಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ, ಅವರು ಪ್ರಧಾನಿ ಆದರೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತಾರೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ.
ಹೇಳಿದ ಮಾತನ್ನು ತಪ್ಪದೆ ನಡೆದುಕೊಂಡಿದ್ದೇವೆ. ದೇಶದ ಸಮಸ್ಯೆಗಳಿಗೆ ಪರಿಹಾರ ನೀಡುವ ಶಕ್ತಿ ಕಾಂಗ್ರೆಸ್‌ಗೆ ಇದೆ. ಈವರೆಗೂ ಯಾರೂ ಭಾರತ್ ಜೋಡೋ ಕಾರ್ಯಕ್ರಮ ಮಾಡಿಲ್ಲ. ರಾಹುಲ್ ಗಾಂಧಿ ಅವರು ಎರಡನೇ ಬಾರಿ ಭಾರತ್ ಜೋಡೋ ಯಾತ್ರೆ ನಡೆಸಲಿದ್ದಾರೆ. ಎಲ್ಲರಿಗೂ ಸಮಾನವಾದ ನ್ಯಾಯ ಸಿಗಲಿ ಎನ್ನುವುದು ಅವರ ಉದ್ದೇಶ ಹೀಗಾಗಿ ಅವರು ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ.