ನಿರಂತರ ಜಾಗೃತಿಯಿಂದ ಮಾತ್ರವೇ ಪೃಥ್ವಿಯನ್ನು ಪ್ಲಾಸ್ಟಿಕ್‌ ಕಬಂಧ ಬಾಹುಗಳಿಂದ ರಕ್ಷಿಸಲು ಸಾಧ್ಯ: ಶಾಂತ ಎ ತಿಮ್ಮಯ್ಯ

ಹೊಸದಿಗಂತ ವರದಿ ಹುಬ್ಬಳ್ಳಿ:

ಸರ್ಕಾರ ಪ್ಲಾಸ್ಟಿಕ್ ಬಳಕೆಯ ನಿಷೇಧದ ಬಗ್ಗೆ ಬಹಳ ಗಂಭೀರವಾಗಿ ಪರಿಗಣಿಸಿದ್ದು, ಜಾಗೃತಿ ಕಾರ್ಯ ಒಂದು ದಿನಕ್ಕೆ‌ ಸೀಮಿತವಾಗದೆ ನಿರಂತರವಾಗಿ ನಡೆಯಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಶಾಂತ ಎ ತಿಮ್ಮಯ್ಯ ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆವರಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯಿಂದ‌ ಪರಿಸರದ ಗಾಢವಾದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ಮಳೆಗಾಲದಲ್ಲಿ ಕಾಲುವೆ ಮೂಲಕ ನದಿ ಮತ್ತು ಸಮುದ್ರಗಳಲ್ಲಿ ಸೇರುತ್ತಿದ್ದು, ಪ್ರವಾಹ ಮತ್ತು ಜಲ ಜೀವರಾಶಿಗಳ ಮೇಲೆ‌ ಪರಿಣಾಮ ಬೀರುತ್ತಿದೆ. ಜು.1 ರಂದು ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಸರ್ಕಾರ ಸೂಚಿಸಿದೆ. ಇದಕ್ಕೆ‌ ಸಾರ್ವಜನಿಕರ ಸಹಕಾರ ಬಹಳ ಮುಖ್ಯವಾಗಿದೆ. ಏಕೆಂದರೆ ಅಂತಿಮ‌ ಬಳಕೆ ದಾರರು ಅವರಾಗಿದ್ದಾರೆ. ಕಳೆದ 20 ದಿನಗಳಲ್ಲಿ ಬಹಳ ಬದಲಾವಣೆಯಾಗಿದೆ ಎಂದು ತಿಳಿಸಿದರು. ಪ್ಲಾಸ್ಟಿಕ್ ಬಳಕೆಯ ನಿಷೇಧದಲ್ಲಿ ಹಿರಿಯ ನಾಗರಿಕ ಸಹಕಾರ‌ ಬಹಳ ಮುಖ್ಯವಾಗಿದೆ. ಏಕೆಂದರೆ ಮನೆಯಲ್ಲಿರುವ ಮಕ್ಕಳಿಗೆ ಇದರ ಬಗ್ಗೆ ಪ್ಲಾಸ್ಟಿಕ್ ಬಳಕೆಯಿಂದ ಏನು ಪರಿಣಾಮವಾಗುತ್ತದೆ ಎಂಬ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಇದರಿಂದ‌ ಭವಿಷ್ಯದಲ್ಲಿ ಸಂಪೂರ್ಣವಾಗಿ ನಿಷೇಧಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!