March 17, 2026
Tuesday, March 17, 2026
spot_img

ಹೇಡಿಗಳೇ ಹೀಗೆ ಮಾಡೋದು! ಕಾಬುಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿಗೆ ಭಾರತ ಖಂಡನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಬೂಲ್‌ನ ಆಸ್ಪತ್ರೆಯ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಇದೊಂದು ಹೇಡಿಗಳ ಕೃತ್ಯ ಎಂದು ಭಾರತ ಈ ದಾಳಿಯನ್ನು ಖಂಡಿಸಿದೆ.

ಆಸ್ಪತ್ರೆಯ ಮೇಲಿನ ದಾಳಿಯು ಪಾಕಿಸ್ತಾನದ ಘೋರ ಆಕ್ರಮಣಕಾರಿ ಕೃತ್ಯ. ಅಫ್ಘಾನಿಸ್ತಾನದ ಸಾರ್ವಭೌಮತ್ವದ ಮೇಲಿನ ದಾಳಿ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಬೆದರಿಕೆ ಎಂದು ವಿದೇಶಾಂಗ ಸಚಿವಾಲಯ ಆಕ್ರೋಶ ಹೊರಹಾಕಿದೆ.

ಪ್ರಪಂಚದಾದ್ಯಂತ ಮುಸ್ಲಿಂ ಸಮುದಾಯಗಳಲ್ಲಿ ಶಾಂತಿ, ಆತ್ಮಾವಲೋಕನ ಮತ್ತು ಕರುಣೆಯ ಸಂದರ್ಭವಾದ ಪವಿತ್ರ ರಂಜಾನ್ ತಿಂಗಳಲ್ಲಿ ಈ ದಾಳಿ ನಡೆದಿರುವುದು ಖಂಡನೀಯ. ಆಸ್ಪತ್ರೆ ಮತ್ತು ಅದರ ರೋಗಿಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಳ್ಳುವುದನ್ನು ಸಮರ್ಥಿಸುವ ನೈತಿಕತೆ ಅವರಿಗಿಲ್ಲ ಎಂದು ಪಾಕ್‌ ವಿರುದ್ಧ ಭಾರತ ಕೆಂಡಕಾರಿದೆ.

ದಾಳಿಯಲ್ಲಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನ ಇತಿಹಾಸದಲ್ಲೇ ಇದು ಅತ್ಯಂತ ಭೀಕರ ದಾಳಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !