ಭಾರತದ ಬಗ್ಗೆ ಬರೀ ಫೇಕ್‌ ನ್ಯೂಸ್‌: ಚೀನಾ ಸರ್ಕಾರದ ‘Global Times’ ಟ್ವಿಟರ್ ಖಾತೆ ನಮ್ಮಲ್ಲಿ ಬ್ಯಾನ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತೀಯ ಸೇನೆ ಕುರಿತು ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿದ್ದ ಚೀನಾದ ಸರ್ಕಾರಿ ಮಾಧ್ಯಮ ಗ್ಲೋಬಲ್ ಟೈಮ್ಸ್‌ನ ಎಕ್ಸ್ ಖಾತೆಗೆ ಭಾರತ ನಿರ್ಬಂಧ ಹೇರಿದೆ.

ಪಹಲ್ಗಾಮ್ ಉಗ್ರರ ದಾಳಿ ಬಳಿಕ ಉಗ್ರರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಈ ಕಾರ್ಯಾಚರಣೆ ಕುರಿತು ಚೀನಾದ ಸರ್ಕಾರಿ ಮಾಧ್ಯಮ ಗ್ಲೋಬಲ್ ಟೈಮ್ಸ್ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿತ್ತು.

ಇದರ ಬೆನ್ನಲ್ಲೇ ಚೀನಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಕಟಿಸುವುದಕ್ಕೂ ಮುನ್ನ ಸತ್ಯಾಸತ್ಯತೆಗಳನ್ನು ಪರಿಶೀಲಿಸುವಂತೆ ಒತ್ತಾಯಿಸಿತ್ತು.

ಪ್ರಿಯ ಗ್ಲೋಬಲ್ ಟೈಮ್ಸ್ ನ್ಯೂಸ್, ಈ ರೀತಿಯ ತಪ್ಪು ಮಾಹಿತಿಯನ್ನು ಪ್ರಕಟಿಸುವ ಮೊದಲು ಸುದ್ದಿಗಳ ಸತ್ಯಗಳನ್ನು ಪರಿಶೀಲಿಸಲು ಮತ್ತು ನಿಮ್ಮ ಸುದ್ದಿ ಮೂಲಗಳನ್ನು ಮತ್ತೊಮ್ಮೆ ಪರಿಶೀಲಿಸುವಂತೆ ನಾವು ಶಿಫಾರಸು ಮಾಡುತ್ತೇವೆ ಎಂದು ಹೇಳಿತ್ತು.

ಆಪರೇಷನ್ ಸಿಂಧೂರ್ ಬೆನ್ನಲ್ಲೇ ಹಲವಾರು ಪಾಕಿಸ್ತಾನ ಪರವಿರುವ ಸಾಮಾಜಿಕ ಜಾಲತಾಣದ ಖಾತೆಗಳು ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿವೆ. ಈ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿವೆ. ಈ ಮಾಧ್ಯಮಗಳು ಸುದ್ದಿಯ ಮೂಲಗಳನ್ನು ಪರಿಶೀಲಿಸದೆ ಅಂತಹ ಮಾಹಿತಿಯನ್ನು ಹಂಚಿಕೊಂಡಾಗ, ಅದು ಜವಾಬ್ದಾರಿ ಮತ್ತು ಪತ್ರಿಕೋದ್ಯಮ ನೀತಿಯಲ್ಲಿ ಗಂಭೀರ ಲೋಪವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿತ್ತು. ಇದರ ಬೆನ್ನಲ್ಲೇ ಭಾರತ ಇದೀಗ ಚೀನಾ ಸರ್ಕಾರದ ಅಧಿಕೃತ ಟ್ವಿಟರ್ ಖಾತೆಗೆ ನಿರ್ಬಂಧ ಹೇರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here