ಒಂದು ಕೆಜಿ ಚಿನ್ನ ಸಾಗಾಟಕ್ಕೆ ಬರೀ ಐದು ಲಕ್ಷ ಕಮಿಷನ್‌! ಕಿಂಗ್‌ಪಿನ್‌ ರನ್ಯಾ ಅಲ್ಲ ಇನ್ಯಾರು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿನ್ನ ಕಳ್ಳಸಾಗಣೆಯಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ನಟಿ ರನ್ಯಾರನ್ನು ಬಂಧಿಸಿರುವ ಡಿಆರ್‌ಐ ಅಧಿಕಾರಿಗಳ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗಿವೆ. ರನ್ಯಾ ಕೇವಲ ಪಾತ್ರಧಾರಿ, ಅಸಲಿ ಕಿಂಗ್ ಬೇರೆಯೇ ಇದ್ದಾರೆ ಎನ್ನಲಾಗಿದೆ.

17 ಕೋಟಿ ಬೆಲೆಯ ಚಿನ್ನ ಖರೀದಿ ಮಾಡುವಷ್ಟು ರನ್ಯಾ ಶ್ರೀಮಂತಳಲ್ಲ. ರನ್ಯಾ ಹಿರಿಯ ಪೊಲೀಸ್ ಅಧಿಕಾರಿಯ ಮಲಮಗಳು. ಆಕೆಯನ್ನು ಬಳಸಿಕೊಂಡರೆ ಸುಲಭವಾಗಿ ಚಿನ್ನ ಸಾಗಾಟ ಮಾಡಬಹುದಾಗಿದೆ. ಇದೇ ಲೆಕ್ಕಾಚಾರದಲ್ಲಿ ರನ್ಯಾಳನ್ನು ಚಿನ್ನ ಸಾಗಾಟದಲ್ಲಿ ಬಳಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಅಕ್ರಮ ಚಿನ್ನ ಸಾಗಾಟದಲ್ಲಿ ಏರ್ಪೋರ್ಟ್‌ನ ಕೆಲ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಚಿನ್ನ ಸಾಗಾಟದಲ್ಲಿ ನಟಿ ರನ್ಯಾಗೆ ಕೆಜಿಗೆ ನಾಲ್ಕರಿಂದ ಐದು ಲಕ್ಷ ಕಮಿಷನ್ ನೀಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಹಾಗಾದರೆ, ರನ್ಯಾ ಬೆಂಗಳೂರಿಗೆ ತಂದ ಚಿನ್ನವನ್ನು ಯಾರಿಗೆ ಕೊಡುತ್ತಿದ್ದರು ಎನ್ನುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!