October 25, 2026
Sunday, October 25, 2026
spot_img

‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’: ಐಟಿ ಕಂಪನಿಗಳಲ್ಲಿ ಸ್ಥಳೀಯರ ಕಡೆಗಣನೆಗೆ ಸಿಎಂ ಡಿಕೆಶಿ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್;‌

ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, “ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ ಎಂದಿದ್ದಾರೆ.

ಕನ್ನಡ ಮಾತೃಭಾಷೆ ಇರುವವರನ್ನು ಯಾವುದೇ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಕಡೆಗಣಿಸಿದರೆ ಸರ್ಕಾರ ಸುಮ್ಮನಿರಲ್ಲ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಬೆಂಗಳೂರು ಭಾರತದ ತಂತ್ರಜ್ಞಾನ ರಾಜಧಾನಿಯಾಗಲು ಕನ್ನಡಿಗರ ಪ್ರತಿಭೆಯೇ ಕಾರಣವಾಗಿದ್ದು, ಕನ್ನಡಿಗರ ಹಕ್ಕನ್ನು ಕಡೆಗಣಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:

ಸಿಎಂ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದ್ದು, ಕೇವಲ ಟ್ವೀಟ್ ಮಾಡಿದರೆ ಸಾಲದು, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಕಟ್ಟುನಿಟ್ಟಾದ ಕಾನೂನನ್ನು ಜಾರಿಗೆ ತನ್ನಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Must Read

Skip to toolbar