ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸುಮಾರು 6,158 ಸರ್ಕಾರಿ ಶಾಲೆಗಳಲ್ಲಿ ತಲಾ ಒಬ್ಬರು ಶಿಕ್ಷಕರಿದ್ದು, 1.38 ಲಕ್ಷ ವಿದ್ಯಾರ್ಥಿಗಳ ಜವಾಬ್ದಾರಿ ಹೊಂದಿದ್ದರೆ, ಶೂನ್ಯ ದಾಖಲಾತಿ ಹೊಂದಿರುವ 530 ಶಾಲೆಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ. ಆದರೆ 358 ಶಿಕ್ಷಕರಿದ್ದಾರೆ.
ಇದು ವ್ಯವಸ್ಥೆಯಲ್ಲಿನ ಗಂಭೀರ ಲೋಪವನ್ನು ತೋರಿಸುತ್ತದೆ. ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ ಇನ್ನೂ ಕೆಲವು ಶಾಲೆಗಳಲ್ಲಿ ಮಕ್ಕಳು ದಾಖಲಾಗದಿದ್ದರೂ ಹೆಚ್ಚುವರಿ ಸಿಬ್ಬಂದಿ ಇದ್ದಾರೆ. ಆದರೆ, ಅಂತಹ ಶಾಲೆಗಳ ಶಿಕ್ಷಕರನ್ನು ಅಗತ್ಯವಿರುವೆಡೆಗೆ ವರ್ಗಾಯಿಸಲಾಗಿದೆ ಎಂದು ಇಲಾಖೆ ಹೇಳಿದೆ.
ರಾಜ್ಯದಲ್ಲಿ ಒಬ್ಬರೇ ಶಿಕ್ಷಕರನ್ನು ಹೊಂದಿರುವ ಒಟ್ಟು ಶಾಲೆಗಳ ಸಂಖ್ಯೆ 2023-24ರಲ್ಲಿದ್ದ 6,360 ರಿಂದ 2024-25ರಲ್ಲಿ 6,158ಕ್ಕೆ ಅಂದರೆ 202ಕ್ಕೆ ಕಡಿಮೆಯಾಗಿದೆ. ಆದಾಗ್ಯೂ, ದಾಖಲಾತಿಯು 33,794 ರಷ್ಟು ಕಡಿಮೆಯಾಗಿದೆ. ಇದಕ್ಕೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಏರಿಕೆಯಾಗಿರಬಹುದೆಂದು ತಜ್ಞರು ಹೇಳುತ್ತಾರೆ.
ವಿಷಯ ಶಿಕ್ಷಕರ ಕೊರತೆ ವಿದ್ಯಾರ್ಥಿಗಳನ್ನು ದೂರ ಮಾಡುತ್ತಿದೆ. ಅನೇಕ ಸಂದರ್ಭಗಳಲ್ಲಿ ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಕಲಿಸಲು ಮಾತ್ರ ಶಿಕ್ಷಕರನ್ನು ನಿಯೋಜಿಸಲಾಗಿದೆ ಮತ್ತು ಗಣಿತ ವಿಜ್ಞಾನ ಅಥವಾ ಇಂಗ್ಲಿಷ್‌ನಂತಹ ಪ್ರಮುಖ ವಿಷಯಗಳಲ್ಲ. ಅದೇ ಸಮಯದಲ್ಲಿ ಶೇ,100 ರಷ್ಟು ಉತ್ತೀರ್ಣ ದರ ಕಾಪಾಡಿಕೊಳ್ಳಳು ಶಾಲೆಗಳು ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಹೊರಹಾಕುತ್ತಿವೆ ಎಂದು ತಜ್ಞರು ಹೇಳುತ್ತಾರೆ.
ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ್ ಶರ್ಮಾ ಮಾತನಾಡಿ, ಈ ಶಾಲೆಗಳಲ್ಲಿ ಶಿಕ್ಷಕರು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಮಾತ್ರ ಕಲಿಸುತ್ತಾರೆ. ಪೋಷಕರು, ತಮ್ಮ ಮಕ್ಕಳು ಗಣಿತ ಮತ್ತು ವಿಜ್ಞಾನವನ್ನು ಕಲಿಸುವ ಶಾಲೆಗಳಿಗೆ ಹೋಗಬೇಕೆಂದು ಬಯಸುತ್ತಾರೆ. ಇದರಿಂದ ಅನೇಕರು ಅನುದಾನಿತ ಅಥವಾ ಖಾಸಗಿ ಶಾಲೆಗಳತ್ತ ಒಲವು ತೋರುತ್ತಿದ್ದಾರೆ ಎಂದರು.