ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮುಖಂಡರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ ಡಿ. ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನನ್ನ ತಂತ್ರ ಎಂದು ಹೇಳಿದ್ದಾರೆ.
ಡಾ.ಮಂಜುನಾಥ್ ಈಗಾಗಲೇ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಸಂಚಲನ ಮೂಡಿಸಿದ್ದಾರೆ. ಹಲವರು ವೈದ್ಯರನ್ನು ಕಾಣಲು ಬರುತ್ತಿದ್ದು, ಡಾ. ಮಂಜುನಾಥ್ ಮತ್ತು ಬಿಜೆಪಿಯನ್ನು ಗೆಲ್ಲಿಸಬೇಕು ಮತ್ತು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದು ಜನರಿಗೆ ಮನವರಿಕೆಯಾಗಿದೆ ಎಂದರು.
ಕ್ಷೇತ್ರದಲ್ಲಿ ದೊಡ್ಡಮಟ್ಟದ ಪ್ರಚಾರ ನಡೆಯುತ್ತಿದೆ ಎಂದ ಕುಮಾರಸ್ವಾಮಿ ತಮ್ಮ ಚುನಾವಣಾ ಸ್ಟ್ರಾಟಿಜಿಯನ್ನು ಪರಿಷ್ಕರಿಸಿ ‘ಡಿಕೆಶಿಗೆ ನೋಟು ಡಾಕ್ಟ್ರಿಗೆ ವೋಟು’ ಎಂದು ಹೇಳಿದ್ದಾರೆ.