ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂವಿಧಾನ ಬದ್ಧವಾಗಿ ಜಾತಿ ಜನಗಣತಿ ಮಾಡುವ ಅಧಿಕಾರ ಕೇಂದ್ರಕ್ಕೆ ಮಾತ್ರ ಇರುವುದು. ಇವರು ಸಾಮಾಜಿಕ, ಆರ್ಥಿಕ ಸಮೀಕ್ಷೆ ಎಂದು ಹೇಳಿದ್ದಾರೆ. ಆದ್ರೆ ಅಧಿಕೃತವಾಗಿ ಬಿಡುಗಡೆಯಾಗಿಲ್ಲ. ಸತ್ಯ-ಸುಳ್ಳು ಎಂದು ಪ್ರತಿಕ್ರಿಯಿಸುವುದು ಕಷ್ಟ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.
ಅಲ್ಪಸಂಖ್ಯಾತರು ಯಾರು? ರಾಜ್ಯದ ಜನಸಂಖ್ಯೆಯಲ್ಲಿ 2ನೇ ದೊಡ್ಡ ಸಂಖ್ಯೆಯಲ್ಲಿರುವವರು ಅಲ್ಪಸಂಖ್ಯಾತರಾಗುತ್ತಾರಾ? ಮೀಸಲಾತಿ ಸಂಬಂಧ ಕೋರ್ಟ್‌ನಲ್ಲಿ ಮೊಕದ್ದಮೆ ಇದ್ದಾಗ ಕೇಂದ್ರ ಮೀಸಲಾತಿ ಪರ ಪ್ರಮಾಣಪತ್ರ ಸಲ್ಲಿಸಿತ್ತು. ಇದು ಮೀಸಲಾತಿ ಬಗ್ಗೆ ಬಿಜೆಪಿಗೆ ಇರುವ ಬದ್ಧತೆ. ಸಮಾಜ ಒಡೆಯುವ ದುರುದ್ದೇಶವನ್ನ ನಾವು ಬೆಂಬಲಿಸುವುದಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.