ಶ್ರೀರಾಮನ ಭಕ್ತರಿಗೆ ಮಾತ್ರ ರಾಮಲಲ್ಲಾ ಪ್ರತಿಷ್ಠಾಪನೆಗೆ ಆಹ್ವಾನ: ಠಾಕ್ರೆ ಹೇಳಿಕೆಗೆ ತಿರುಗೇಟು ಕೊಟ್ಟ ಆಚಾರ್ಯ ಸತ್ಯೇಂದ್ರ ದಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶ್ರೀರಾಮನ ಭಕ್ತರಿಗೆ ಮಾತ್ರ ರಾಮಲಲ್ಲಾ(Ram Lalla) ಪ್ರತಿಷ್ಠಾಪನೆಗೆ ಆಹ್ವಾನ ನೀಡಲಾಗಿದೆ ಎಂದು ಅಯೋಧ್ಯೆಯ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್(Acharya Satyendra Das) ಹೇಳಿದ್ದಾರೆ

ಅಯೋಧ್ಯೆ(Ayodhya)ಯ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ವಿಚಾರಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಹೇಳಿಕೆಯೊಂದನ್ನು ನೀಡಿದ್ದು, ಇದಕ್ಕೆ ತಿರುಗೇಟು ನೀಡಿದ್ದಾರೆ.

ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ ಎಂದು ಇತ್ತೀಚೆಗೆ ಉದ್ಧವ್ ಠಾಕ್ರೆ ಹೇಳಿದ್ದರು. ಈ ಹೇಳಿಕೆಗೆ ಆಚಾರ್ಯ ಸತ್ಯೇಂದ್ರ ದಾಸ್ ಪ್ರತಿಕ್ರಿಯೆ ನೀಡಿದ್ದು, ರಾಮನ ಭಕ್ತರಿಗೆ ಮಾತ್ರ ಆಹ್ವಾನ ನೀಡಲಾಗುತ್ತದೆ. ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂಬ ಮಾತು ತಪ್ಪು. ಪ್ರಧಾನಿ ನರೇಂದ್ರ ಮೋದಿಯವರು ಅಪಾರ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಇದು ಅವರ ರಾಜಕೀಯವಲ್ಲ, ಭಕ್ತಿ ಎಂದಿದ್ದಾರೆ.

ಉದ್ಧವ್ ಠಾಕ್ರೆಯವರು, ರಾಮ ಮಂದಿರ ಉದ್ಘಾಟನೆಗೆ ನನಗೆ ಯಾವುದೇ ಆಹ್ವಾನ ಬಂದಿಲ್ಲ. ಅಲ್ಲಿಗೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ. ರಾಮ ಯಾವುದೇ ಪಕ್ಷದ ಆಸ್ತಿಯಲ್ಲ, ರಾಮ ಎಲ್ಲರಿಗೂ ಸೇರಿದವರು. ಹೀಗಾಗಿ ಇದನ್ನು ರಾಜಕೀಯಗೊಳಿಸಬಾರದು ಎಂದು ನಾನು ಬಯಸುತ್ತೇನೆ. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನೀಡಿದೆ, ಸರ್ಕಾರವಲ್ಲ ಎಂದಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!