ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಆರೋಪಿಯಾಗಿರುವ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳು ಮಂದಿಗೆ ಮಾತ್ರ ಆಸ್ಪತ್ರೆಗೆ ಭೇಟಿ ನೀಡಲು ಅವಕಾಶವಿದೆ.
ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಅವರಿಗೆ ಬೆನ್ನುನೋವಿನ ಚಿಕಿತ್ಸೆಗಾಗಿ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಜಿಎಸ್ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿರುವ ವಿಶೇಷ ರೂಮ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಟ ದರ್ಶನ್ ಭೇಟಿಗೆ ಏಳು ಜನ ಕೇರ್ ಟೇಕರ್ಸ್ಗಳಿದ್ದು, ಅವರನ್ನು ಹೊರತುಪಡಿಸಿ ಯಾರಿಗೂ ಅವರನ್ನು ಭೇಟಿ ಮಾಡಲು ಅವಕಾಶವಿರುವುದಿಲ್ಲ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ತಾಯಿ ಮೀನಾ, ಅವರ ಸಹೋದರ ದಿನಕರ್, ಅವರ ಸಹೋದರಿ, ನಟ ಧನ್ನೀರ್ ಮತ್ತು ದರ್ಶನ್ ಅವರ ವಕೀಲರಿಗೆ ಮಾತ್ರ ಭೇಟಿ ಮಾಡಲು ಅವಕಾಶವಿದೆ.