ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೂರ್ಣಗೊಂಡಿರುವ 3.14-ಕಿಮೀ ಮಾದಾವರ-ನಾಗಸಂದ್ರ ಮಾರ್ಗ ಗುರುವಾರ ವಾಣಿಜ್ಯ ಕಾರ್ಯಾಚರಣೆಗೆ ಮುಕ್ತಗೊಳ್ಳುತ್ತಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಮೂಲಗಳು ಮಾಹಿತಿ ನೀಡಿವೆ.
ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಕಾರ್ಯಕ್ರಮದ ಮೂಲಕ ರೈಲು ಸಂಚಾರಕ್ಕೆ ದಿನಾಂಕ, ಸಮಯ ನಿಗದಿಯಾಗಿಲ್ಲ. ಹೀಗಾಗಿ ಔಪಚಾರಿಕವಾಗಿ ಗುರುವಾರವೇ ರೈಲು ಸಂಚಾರ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಈ ನಡುವೆ ನಾಗಸಂದ್ರ-ಮಾದವರ ನಡುವಿನ ಮೆಟ್ರೋ ಸಂಚಾರಕ್ಕೆ ತ್ವರಿತ ಅನುಮತಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಂಸದ ತೇಜಸ್ವಿ ಸೂರ್ಯ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.