ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ರೈಲು ಡಿಕ್ಕಿಯಾದ ಘಟನೆಯನ್ನು ಜನ ಮರೆಯಲು ಸಾಧ್ಯವಾಗುತ್ತಿಲ್ಲ. ಈ ಅಪಘಾತದಲ್ಲಿ 275 ಮಂದಿ ಪ್ರಾಣ ಕಳೆದುಕೊಂಡು ನೂರಾರು ಪ್ರಯಾಣಿಕರು ಗಾಯಗೊಂಡಿದ್ದರು. ಇದು ಮೂರು ದಶಕಗಳಲ್ಲೇ ಅತಿ ದೊಡ್ಡ ರೈಲು ಅಪಘಾತವಾಗಿ ಇತಿಹಾಸದಲ್ಲಿ ದಾಖಲಾಗಿದೆ.
ಇದೇ ವೇಳೆ ಭಾನುವಾರ ಮುಂಜಾನೆ 4 ಗಂಟೆಗೆ ಎರಡು ಗೂಡ್ಸ್ ರೈಲುಗಳ ಡಿಕ್ಕಿಯಿಂದಾಗಿ 12 ಬೋಗಿಗಳು ಹಳಿತಪ್ಪಿವೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ಓಂಡಾ ನಿಲ್ದಾಣದಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೂಡ್ಸ್ ರೈಲಿನ ಲೋಕೋ ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.
ರೈಲ್ವೆ ಅಧಿಕಾರಿಗಳ ಪ್ರಕಾರ.. ಎರಡು ಖಾಲಿ ಗೂಡ್ಸ್ ರೈಲುಗಳು ಡಿಕ್ಕಿಯಾಗಿದ್ದು, ಅಪಘಾತಕ್ಕೆ ಕಾರಣವೇನು..?ಎಂದು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಎರಡು ರೈಲುಗಳು ಹೇಗೆ ಡಿಕ್ಕಿ ಹೊಡೆದವು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಅಪಘಾತದಿಂದಾಗಿ ಆದ್ರಾ ವಿಭಾಗ. ಪಶ್ಚಿಮ ಬಂಗಾಳದ ನಾಲ್ಕು ಜಿಲ್ಲೆಗಳಿಗೆ ರೈಲು ಸಂಚಾರ ಸ್ಥಗಿತಗೊಂಡಿದೆ. ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್, ಜಾರ್ಖಂಡ್‌ನ ಮೂರು ಜಿಲ್ಲೆಗಳು, ಧನ್‌ಬಾದ್, ಬೊಕಾರೊ ಮತ್ತು ಸಿಂಗ್‌ಭೂಮ್ ಆಗ್ನೇಯ ರೈಲ್ವೆಯ ವ್ಯಾಪ್ತಿಗೆ ಒಳಪಟ್ಟಿವೆ.