ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡತಿ ಸೀರಿಯಲ್ ಖ್ಯಾತಿಯ ರಂಜನಿ ರಾಘವನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜೀವನ ಸಂಗಾತಿಯನ್ನು ನಟಿ ಪರಿಚಯಿಸಿದ್ದಾರೆ.
ಮತ್ತೊಬ್ಬ ನಟಿ ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ. ಸಾಗರ್ ಭಾರಧ್ವಜ್ ಎಂಬುವವರ ಜೊತೆ ರಂಜನಿ ರಾಘವನ್ ಎಂಗೇಜ್ ಆಗಿದ್ದಾರೆ. ಜೀವನ ಸಂಗಾತಿ, ನನ್ನ ಹುಡುಗ ಎಂದು ಹ್ಯಾಶ್ ಟ್ಯಾಗ್ ಕೊಟ್ಟು ಫೋಟೋ ಶೇರ್ ಮಾಡಿ ನಟಿ ಸಂಭ್ರಮಿಸಿದ್ದಾರೆ.