102 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ: ಶುಕ್ರವಾರ ಮೊದಲ ಹಂತದ ಮತದಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದ್ದು, 102 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ.

ನಾಳೆ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಏಪ್ರಿಲ್ 19 ರ ಶುಕ್ರವಾರದಂದು 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣಾ ಪ್ರಚಾರವು ಬುಧವಾರ ಮಧ್ಯಾಹ್ನ 3 ಗಂಟೆಗೆ ಈಶಾನ್ಯದಲ್ಲಿ ಮುಕ್ತಾಯಗೊಂಡಿತು. ಇತರ ಪ್ರದೇಶಗಳಲ್ಲಿ ಸಂಜೆ 6 ಗಂಟೆಗೆ ಮುಕ್ತಾಯವಾಯಿತು ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!