14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ.

ಈಗಾಗಲೇ ಎಲ್ಲ ಪಕ್ಷದ ಅಭ್ಯರ್ಥಿಗಳು ಸಮಾವೇಶ, ರೋಡ್‌ ಶೋ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ನಾಳೆ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಮಾತ್ರ ಅವಕಾಶವಿದೆ.

ರಾಜ್ಯದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!