ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಪ್ರಕರಣಗಳ ತನಿಖೆಗೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೀಡಿದ್ದ ಮುಕ್ತ ಸಮ್ಮತಿಯನ್ನು ಹಿಂಪಡೆದಿದ್ದ ಹಿಂದಿನ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರದ ನಿರ್ಧಾರವನ್ನು ಏಕನಾಥ್ ಶಿಂಧೆ ಸರ್ಕಾರ ಶುಕ್ರವಾರ ರದ್ದುಗೊಳಿಸಿದೆ.
ಈ ಮೂಲಕ ಸಿಬಿಐಗೆ ನೀಡಿದ್ದ ಮುಕ್ತ ಸಮ್ಮತಿಯನ್ನು ಶಿಂಧೆ ಸರ್ಕಾರ ಮರುಸ್ಥಾಪಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಕ್ತ ಸಮ್ಮತಿಯನ್ನು ಹಿಂಪಡೆಯುವ ಎಂವಿಎ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದ ಗೃಹ ಇಲಾಖೆಯ ಪ್ರಸ್ತಾವನೆಗೆ ಸಿಎಂ ಶಿಂಧೆ ಅನುಮತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ(ಸಿಎಂಒ)ಯ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರದಿಂದಾಗಿ ಸಿಬಿಐ ರಾಜ್ಯದಲ್ಲಿ ಯಾವುದೇ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.