ಗೊಂದಲಗಳಿಗೆ ತೆರೆ: ಮೇ.20ರ ಬಳಿಕವೇ CBSE ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟ ಎಂದ ಮಂಡಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಮೇ.20ರ ಬಳಿಕ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದೆ.

CBSE ಬೋರ್ಡ್ ತನ್ನ ವೆಬ್‌ಸೈಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, 10 ಮತ್ತು 12 ನೇ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಮೇ 20ರ ನಂತರ ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

ಈ ಮೊದಲು ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಹೀಗಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳಬಾರದು ಎಂದು ವೆಬ್​ಸೈಟ್​ನಲ್ಲಿ ತಿಳಿಸಿದೆ.

CBSE 10 ಮತ್ತು 12ನೇ ತರಗತಿ ಬೋರ್ಡ್​ ಪರೀಕ್ಷೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ನಡೆಸಲಾಗಿತ್ತು. ಇದಾದ ಬಳಿಕ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಫಲಿತಾಂಶ ಪ್ರಕಟಿಸಲು ಸಿಬಿಎಸ್‌ಇ ಉತ್ತರ ಪತ್ರಿಕೆಗಳನ್ನು ತ್ವರಿತವಾಗಿ ಮೌಲ್ಯಮಾಪನ ಮಾಡಿತ್ತು. ಪರೀಕ್ಷೆಗಳು ಮುಗಿದು ಕೇವಲ 15 ದಿನಗಳ ನಂತರ, ಸಿಬಿಎಸ್‌ಇ ಬೋರ್ಡ್ 10 ಮತ್ತು 12 ನೇ ತರಗತಿ ಫಲಿತಾಂಶಗಳ ಪ್ರಕಟಣೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹರಿದಾಡಿದ್ದು, ವಿದ್ಯಾರ್ಥಿಗಳಲ್ಲಿ ಗೊಂದಲ ಶುರುವಾಗಿತ್ತು. ಇದೀಗ ಸಿಬಿಎಸ್​ಇ ಮಂಡಳಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!