ಮುಂಬೈನಲ್ಲಿ ಆಪಲ್ ಕಚೇರಿ ಉದ್ಘಾಟನೆ, ಕ್ಯೂನಲ್ಲಿ ನಿಂತ ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯರನ್ನು ಸೆಳೆಯುವ ಉದ್ದೇಶದಿಂದ ಭಾರತದಲ್ಲಿ ವಿಶ್ವದ ಅತಿದೊಡ್ಡ ಮೊಬೈಲ್ ಫೋನ್ ಮಾರುಕಟ್ಟೆಗಳಲ್ಲಿ ಒಂದಾದ ಆಪಲ್ ಕಂಪನಿ ಭಾರತದಲ್ಲಿ ತನ್ನ ಸ್ವಂತ ಸ್ಟೋರ್‌ನ್ನು ಅನಾವರಣ ಮಾಡಿದೆ.

ಆಪಲ್ ಸಿಇಒ ಟಿಮ್ ಕುಕ್ ಈ ಮುಂಬೈನಲ್ಲಿರುವ ಈ ಸ್ಟೋರ್‌ನ್ನು ಉದ್ಘಾಟಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಐದು ಸಾವಿರ ಆಪಲ್ ಫೋನ್ ಬಳಕೆದಾರರು ಆಗಮಿಸಿದ್ದರು.

ಟಿಮ್ ಆಗಮಿಸುತ್ತಿದ್ದಂತೆಯೇ ಆಪಲ್ ಸಂಸ್ಥೆ ಉದ್ಯೋಗಿಗಳು ಡ್ಯಾನ್ಸ್ ಮಾಡುತ್ತಾ, ಚಪ್ಪಾಳೆ ತಟ್ಟುತ್ತಾ ಅವರನ್ನು ಸ್ವಾಗತಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

2020 ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ಕ್ಯಾಲಿಫೋರ್ನಿಯಾ ಮೂಲದ ಕಂಪನಿಗೆ ಭಾರತ ದೊಡ್ಡ ಮಾರುಕಟ್ಟೆಯಾಗಿದೆ. ಉದ್ಘಾಟನೆಗೂ ಮುನ್ನವೇ ಜನರು ಕ್ಯೂನಲ್ಲಿ ನಿಂತಿದ್ದು ಕಂಡುಬಂದಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!