February 5, 2026
Thursday, February 5, 2026
spot_img

ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ: ಓರ್ವ ನಕ್ಸಲ್ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಾವೋವಾದಿ ಹತನಾಗಿದ್ದಾನೆ. ಇದರೊಂದಿಗೆ ಈ ವರ್ಷ

ಗುರುವಾರ ಬೆಳಗ್ಗೆ 7.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜಾಪುರ್ ಜಿಲ್ಲೆಯ ಅರಣ್ಯದಲ್ಲಿ ಗುರುವಾರ ಬೆಳಗ್ಗೆ 7.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ .ಹತ್ಯೆಗೀಡಾದ ಮಾವೋವಾದಿಯ ಮೃತದೇಹ ಮತ್ತು ಎಕೆ -47 ರೈಫಲ್ ಪತ್ತೆಯಾಗಿದೆ.

ಆತ ಮಾವೋವಾದಿ ವಿಭಾಗೀಯ ಸಮಿತಿ ಸದಸ್ಯನಾಗಿದ್ದ. ಜನವರಿ 3ರಂದು, ಬಿಜಾಪುರ ಸೇರಿದಂತೆ ಬಸ್ತಾರ್‌ ಪ್ರದೇಶದಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 14 ಮಾವೋವಾದಿಗಳನ್ನು ಗುಂಡಿಕ್ಕಿ ಕೊಲ್ಲಲಾಯಿತು. ಕಳೆದ ವರ್ಷ, ರಾಜ್ಯಾದ್ಯಂತ 285 ಮಾವೋವಾದಿಗಳು ಹತರಾಗಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !