ಜಮ್ಮುವಿನಲ್ಲಿ ಉಗ್ರರ ವಿರುದ್ಧ ಕಾರ್ಯಾಚರ: ಕೇಂದ್ರದಿಂದ NSG ನಿಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮುವಿನಲ್ಲಿ ಭಯೋತ್ಪಾದಕರನ್ನು ಸಂಪೂರ್ಣವಾಗಿ ಮಟ್ಟಹಾಕಲು ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರತಾ ಪಡೆಗಳಿಗೆ ನೆರವಾಗಲು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ನಿಯೋಜಿಸಲಾಗಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಶುಕ್ರವಾರ ತಿಳಿಸಿದರು.

ಉಗ್ರರ ದಾಳಿ ಹಿನ್ನೆಲೆಯಲ್ಲಿ ವಿಶೇಷ ಪಡೆ ನಿಯೋಜನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಆನಂದ್ ಜೈನ್, ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ ನಿಯೋಜನೆ ನಡೆದಿದೆ. ಯಾವುದೇ ಸಂದರ್ಭವನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದರು.

ಈ ಪ್ರದೇಶದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾದ ಹಿನ್ನೆಲೆಯಲ್ಲಿ ದೇಶದ ಪ್ರಮಖ ಭಯೋತ್ಪಾದನಾ ನಿಗ್ರಹ ಪಡೆಯಾದ ಎನ್‌ಎಸ್‌ಜಿಯ ವಿಶೇಷ ಘಟಕ ಜಮ್ಮುವಿನಲ್ಲಿ ಬೀಡುಬಿಟ್ಟಿದೆ. ಗೃಹ ಸಚಿವಾಲಯದ ಸೂಚನೆ ಮೇರೆಗೆ ನಗರದಲ್ಲಿ NSG ನಿಯೋಜಿಸಲಾಗಿದೆ.

ಭಯೋತ್ಪಾದಕ ಪರಿಸರ ವ್ಯವಸ್ಥೆ ಮತ್ತು ಜಾಲವನ್ನು ನಿರ್ಮೂಲನೆ ಮಾಡಲು ಜಮ್ಮು ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಎಡಿಜಿಪಿ ಹೇಳಿದರು.

ಪ್ರಕರಣಗಳ ದಾಖಲಾತಿಯ ನಂತರ ಎಲ್ಲಾ ಜಿಲ್ಲೆಗಳಲ್ಲಿ ಶೋಧ ನಡೆಸಿದ್ದೇವೆ. ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ವಿರುದ್ಧ ಹುಡುಕಾಟ ಮುಂದುವರಿಯುತ್ತದೆ. ಭಯೋತ್ಪಾದಕರ ಮೂಲಸೌಕರ್ಯವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ವಿವಿಧ ಜಿಲ್ಲೆಗಳಲ್ಲಿ 50 ಕ್ಕೂ ಹೆಚ್ಚು ಸ್ಥಳಗಳನ್ನು ಹುಡುಕಿದ್ದೇವೆ. ಭಯೋತ್ಪಾದಕರ ಕಾರ್ಯಾಚರಣೆ ಹಾಗೂ ಅವರ ಮೂಲಸೌಕರ್ಯಗಳನ್ನು ಪತ್ತೆ ಹಚ್ಚುವುದು ಪ್ರಥಮ ಆದ್ಯತೆಯಾಗಿದೆ ಎಂದು ಎಡಿಜಿಪಿ ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!