ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್-ಹಮಾಸ್ ಭೀಕರ ಯುದ್ಧದ ಹಿನ್ನೆಲೆಯಲ್ಲಿ ಭಾರತೀಯರನ್ನು ತಾಯ್ನಾಡಿಗೆ ವಾಪಾಸ್ ಕರೆಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಆಪರೇಷನ್ ಅಜಯ್ ಆರಂಭವಾಗಿದ್ದು, ಇಂದು 235 ಭಾರತೀಯರನ್ನು ಹೊತ್ತ ಎರಡನೇ ವಿಮಾನ ಇಸ್ರೇಲ್ನಿಂದ ನವದೆಹಲಿಗೆ ಬಂದಿಳಿದಿದೆ.
ನಿನ್ನೆಯಷ್ಟೇ ಇಸ್ರೇಲ್ನಿಂದ 212 ಭಾರತೀಯ ಪ್ರಜೆಗಳನ್ನು ಭಾರತಕ್ಕೆ ಕರೆತರಲಾಗಿತ್ತು. ಇಂದು ಬೆಳಗ್ಗೆ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಬಂದಿಳಿದಿದ್ದು, ಯುದ್ಧಭೂಮಿಯಿಂದ ಬಂದ ಭಾರತೀಯರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ರಾಜಕುಮಾರ್ ರಂಜನ್ ಸಿಂಗ್ ಬರಮಾಡಿಕೊಂಡಿದ್ದಾರೆ.
ಇಸ್ರೇಲ್ನಲ್ಲಿ ಸಿಲುಕಿರುವ ಭಾರತದ ನಾಗರಿಕರನ್ನು ಮರಳಿ ಕರೆತರಲು ಸರ್ಕಾರ ಅಕ್ಟೋಬರ್ 11 ರಂದ ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿತ್ತು.