ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ನಿಂದ ಭಾರತೀಯರನ್ನು ಕರೆತರುವ ಕೇಂದ್ರ ಸರಕಾರದ ‘ಆಪರೇಷನ್ ಅಜಯ್’ ಕಾರ್ಯಾಚರಣೆ ಮುಂದುವರಿದಿದ್ದು, 286 ಮಂದಿ ಭಾರತೀಯರನ್ನು ಶೀಘ್ರವೇ ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಆಪರೇಷನ್ ಅಜಯ್ ಕಾರ್ಯಾಚರಣೆ ಮುಂದುವರಿದಿದೆ.ಇನ್ನೂ 286 ಪ್ರಯಾಣಿಕರು ಭಾರತಕ್ಕೆ ಹಿಂತಿರುಗುತ್ತಿದ್ದಾರೆ. ಜತೆಗೆ 18 ಮಂದಿ ನೇಪಾಳದ ನಾಗರಿಕರು ಇದ್ದಾರೆ’ ಎಂದು ತಿಳಿಸಿದ್ದಾರೆ.
#OperationAjay update.
286 more passengers are coming back to India.
Also carrying 18 Nepalese citizens. pic.twitter.com/InoQVXQMUZ
— Dr. S. Jaishankar (@DrSJaishankar) October 17, 2023
ಸ್ವದೇಶಕ್ಕೆ ಮರಳಲು ಬಯಸುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರದ ಈಚೆಗೆ ‘ಆಪರೇಷನ್ ಅಜಯ್’ ಕಾರ್ಯಾಚರಣೆ ಆರಂಭಿಸಿತ್ತು.