ಜಮ್ಮು-ಕಾಶ್ಮೀರದಲ್ಲಿ ‘ಆಪರೇಷನ್ ಅಖಲ್’: ಇಬ್ಬರು ಭಯೋತ್ಪಾದಕರ ಹತ್ಯೆ, ಮುಂದುವರಿದ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್ ಕಾಡು ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ಭಯೋತ್ಪಾದಕ ವಿರೋಧಿ ‘ಆಪರೇಷನ್ ಅಖಲ್’ ಕಾರ್ಯಾಚರಣೆ ಮೂರನೇ ದಿನವೂ ತೀವ್ರಗತಿಯಲ್ಲಿ ಮುಂದುವರಿದಿದೆ. ಶನಿವಾರ ಬೆಳಗಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಘರ್ಷಣೆಯಲ್ಲಿ ಭಾರತೀಯ ಸೇನೆಯೊಬ್ಬ ಸೈನಿಕನೂ ಗಾಯಗೊಂಡಿದ್ದಾರೆ.

ಭದ್ರತಾ ಮೂಲಗಳ ಪ್ರಕಾರ, ಹತರಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಹಾರಿಸ್ ನಜೀರ್ ದಾರ್ ಎಂದು ಗುರುತಿಸಲಾಗಿದ್ದು, ಆತ ಪುಲ್ವಾಮಾ ಮೂಲದವನು ಹಾಗೂ ಲಷ್ಕರ್-ಎ-ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯಾಗಿದ್ದಾನೆ. ಮತ್ತೊಬ್ಬ ಭಯೋತ್ಪಾದಕನ ಗುರುತು ದೃಢಪಡಿಸಲಾಗುತ್ತಿದೆ. ಸ್ಥಳದಲ್ಲಿ ಎಕೆ-47 ರೈಫಲ್, ಗ್ರನೇಡ್‌ಗಳು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿವೆ.

ಆಗಸ್ಟ್ 1ರಂದು ಆರಂಭವಾದ ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ, ಜೆಕೆ ಪೊಲೀಸ್ ಮತ್ತು ಸಿಆರ್‌ಪಿಎಫ್ ತಂಡಗಳು ಭಾಗವಹಿಸಿವೆ. ಕಾಡಿನ ದಟ್ಟತೆಯಿಂದಾಗಿ ಕಾರ್ಯಾಚರಣೆ ಸವಾಲಿನಷ್ಟೇ ತೀವ್ರವಾಗಿದೆ. ಡ್ರೋನ್ ಗಸ್ತು, ಥರ್ಮಲ್ ಇಮೇಜಿಂಗ್ ಸಾಧನೆ ಮತ್ತು ರಾತ್ರಿ ದೃಷ್ಟಿ ಉಪಕರಣಗಳ ನೆರವಿನಿಂದ ಶೋಧ ಕಾರ್ಯ ಮುಂದುವರಿದಿದೆ.

ಜಮ್ಮು-ಕಾಶ್ಮೀರದ ಡಿಜಿಪಿ ನಳಿನ್ ಪ್ರಭಾತ್ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಯ ಪರಿಶೀಲನೆ ನಡೆಸಿದ್ದು, ಭದ್ರತಾ ಪಡೆಗಳ ಭದ್ರ ನಿಗಾವಹಿಸುವಿಕೆ ಇನ್ನಷ್ಟು ಬಿಗಿಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!