ಆಪರೇಷನ್ ಬ್ಲೂ ಸ್ಟಾರ್ ವಾರ್ಷಿಕೋತ್ಸವ: ಗೋಲ್ಡನ್ ಟೆಂಪಲ್‌ನಲ್ಲಿ ಖಲಿಸ್ತಾನ್ ಪರ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುರುವಾರ ಆಪರೇಷನ್ ಬ್ಲೂ ಸ್ಟಾರ್‌ನ 40 ನೇ ವಾರ್ಷಿಕೋತ್ಸವದಂದು ಅಮೃತಸರದ ಗೋಲ್ಡನ್ ಟೆಂಪಲ್‌ನಲ್ಲಿ ಸಿಖ್ ಸಮುದಾಯದ ಹಲವಾರು ಜನರು ಖಾಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ್ದಾರೆ.

ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸಿಮ್ರಂಜಿತ್ ಸಿಂಗ್ ಮಾನ್ ಅವರು ಗೋಲ್ಡನ್ ಟೆಂಪಲ್ ಆವರಣದಲ್ಲಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗುತ್ತಾ ಜನರ ನಡುವೆ ಕಾಣಿಸಿಕೊಂಡರು. ಇದೇ ವೇಳೆ ಗೋಲ್ಡನ್ ಟೆಂಪಲ್ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.

“ಇಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಬ್ಯಾರಿಕೇಡ್‌ಗಳನ್ನು ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ಇಡಲಾಗುವುದು” ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಎಸ್‌ಎಸ್ ರಾಂಧವ ಸಿಂಗ್ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!