Sunday, December 10, 2023

Latest Posts

ಆಪರೇಷನ್‌ ಹಸ್ತ: ಬಿಜೆಪಿಗೆ ಗುಡ್‌ ಬೈ ಹೇಳಿದ ಮಾಜಿ ಶಾಸಕ ರಾಮಣ್ಣ ಲಮಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಶಾಸಕ ರಾಮಣ್ಣ ಲಮಾಣಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ. ಗದಗ ಜಿಲ್ಲೆ ಶಿರಹಟ್ಟಿ ಮಾಜಿ ಶಾಸಕರಾದ ಲಮಾಣಿ ಅಕ್ಟೋಬರ್‌ 10ರಂದು ಜಗದೀಶ್‌ ಶೆಟ್ಟರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲಿದ್ದಾರೆ. ಇದೇ ವೇಳೆ ಆಪರೇಷನ್‌ ಹಸ್ತದಿಂದಾಗಿ ಬಿಜೆಪಿಯ ಹಲವು ಮಾಜಿ ಶಾಸಕರು ಕಾಂಗ್ರೆಸ್‌ ಸೇರುವ ಸಾಧ್ಯತೆಯಿದೆ.

ಈ ಕುರಿತು ತಮ್ಮ ಕುಂದ್ರಳ್ಳಿ ನಿವಾಸದಲ್ಲಿ ಮಾತನಾಡಿದ ಲಮಾಣಿ, ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್‌ ಸೇರುವ ಕುರಿತು ಶೆಟ್ಟರ್‌ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದು, ಉಪಮುಖ್ಯಮಂತ್ರಿಯವರನ್ನೂ ಭೇಟಿಯಾಗಿರುವುದಾಗಿ ತಿಳಿಸಿದರು.

ಅಕ್ಟೋಬರ್‌ 10ರಂದು ಅಧಿಕೃತವಾಗಿ ಕೈ ಪಕ್ಷ ಸೇರಲಿದ್ದು, ಇವರ ಜೊತೆ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಸೇರಿದಂತೆ ಹಲವು ಮಾಜಿ ಶಾಸಕರು ಕಾಂಗ್ರೆಸ್‌ ಸೇರುವುದಾಗಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!