Sunday, December 3, 2023

Latest Posts

ಆಪರೇಷನ್ ಹಸ್ತ ನಾವೆಂದೂ ಮಾಡಲ್ಲ, ನಮ್ಮದು ಕೋ- ಆಪರೇಷನ್: ಡಿಸಿಎಂ ಡಿ.ಕೆ. ಶಿವಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಾಲಿ ಶಾಸಕರನ್ನು ನಾನು ಸಂಪರ್ಕ ಮಾಡಲ್ಲ. ಕೇವಲ ಮಾಜಿ ಶಾಸಕರನ್ನಷ್ಟೇ ಮುಟ್ಟುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ (Karnataka Politics) ಆಪರೇಷನ್‌ ಹಸ್ತ (Operation Hasta) ಬಹಳವೇ ಸದ್ದು ಮಾಡುತ್ತಿದೆ. ಈಗಾಗಲೇ ಬಿಜೆಪಿಯ ಒಂದಿಬ್ಬರು ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ ಈ ಮಾತನ್ನು ಹೇಳಿದ್ದಾರೆ.

ಆಪರೇಷನ್ ಹಸ್ತ ನಾವೆಂದೂ ಮಾಡುವುದಿಲ್ಲ, ನಮ್ಮದು ಕೋ- ಆಪರೇಷನ್ ಎಂದು ಪದೇ, ಪದೇ ಹೇಳುತ್ತಿದ್ದೇನೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ರಾಜಕಾರಣದಲ್ಲಿ ಸಿದ್ಧಾಂತ ಮುಖ್ಯವಲ್ಲ ಎನ್ನುವ ಕೆಟ್ಟ ಸಂದೇಶವನ್ನು ಜೆಡಿಎಸ್- ಬಿಜೆಪಿ ಮೈತ್ರಿ ನೀಡಿದೆ. ಜೆಡಿಎಸ್- ಬಿಜೆಪಿ ಮೈತ್ರಿ ನಂತರ ಪಕ್ಷ ಸೇರುವಂತಹವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಮಂಗಳವಾರ ರಾತ್ರಿ ಮೂರು ಜನ ಮಾಜಿ ಶಾಸಕರ ಜೊತೆ ಮಾತುಕತೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಸೇರುವವರ ಸಂಖ್ಯೆ ಹೆಚ್ಚಾಗಲಿದೆ. ನಾವೆಲ್ಲ ಜಾತ್ಯತೀತ ಸರ್ಕಾರ ಇರಬೇಕು ಎಂದು ಹೋರಾಟ ಮಾಡಿದೆವು. ಈಗ ಸರ್ಕಾರ ಬೀಳಿಸಿದವರ ಜತೆಯಲ್ಲೇ ಕೈ ಜೋಡಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!