ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದ ಕುಲಗಾಂವ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ. ಜತೆಗೆ ಒಬ್ಬ ಉಗ್ರನನ್ನು ಸದೆಬಡೆಯಲಾಗಿದೆ.
ಮೃತ ಉಗ್ರ ಜೈಶ್ ಇ ಮೊಹಮ್ಮದ್ ಸಂಘಟನೆಯವನಾಗಿದ್ದ. ಚಕಮಕಿಯಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಲಗಾಂವ್‌ನ ಪರಿವಾನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದಾರೆ. ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರಿದ ಹಿನ್ನೆಲೆ ಭಯೋತ್ಪಾದಕರು ಗುಂಡಿನ ದಾಳಿ ಆರಂಭಿಸಿದ್ದಾರೆ. ಭದ್ರತಾ ಪಡೆಗಳೂ ಪ್ರತಿದಾಳಿ ನಡೆಸಿದ್ದು, ಓರ್ವ ಭಯೋತ್ಪಾದಕ ಹತನಾಗಿದ್ದಾನೆ. ಉಗ್ರರ ಗುಂಡಿನ ದಾಳಿಗೆ ಪೊಲೀಸರೊಬ್ಬರು ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.