‘ಆಪರೇಷನ್ ಕಮಲ’ ಮಾಡಿ ಸರ್ಕಾರ ಬೀಳಿಸುವವರಿಂದ ಒಂದು ರಾಷ್ಟ್ರ ಒಂದು ಚುನಾವಣೆ ಹಾಸ್ಯಾಸ್ಪದ: ಡಿ ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಭಾರತದಂತಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲೋಕಸಭೆ ಮತ್ತು ವಿಧಾಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಸರ್ಕಾರದ ಹಣವನ್ನು ಉಳಿಸುವ ಉದ್ದೇಶದಿಂದ ಅವರು ಮಾಡಲು ಯೋಜಿಸುತ್ತಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಮ್ಮಂತಹ ಪ್ರಜಾಪ್ರಭುತ್ವ ದೇಶದಲ್ಲಿ ಸಾಧ್ಯವಿಲ್ಲ. ‘ಆಪರೇಷನ್ ಕಮಲ’ ಮಾಡಿ ಸರ್ಕಾರ ಬೀಳಿಸುವವರೆ ಒಂದು ರಾಷ್ಟ್ರ ಒಂದು ಚುನಾವಣೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ತಿರುಗೇಟು ನೀಡಿದರು.

ಪ್ರತಿಪಕ್ಷಗಳ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು,’ಪ್ರಾದೇಶಿಕ ಪಕ್ಷಗಳು ಬೆಳೆಯುವುದು ಅವರಿಗೆ ಇಷ್ಟವಿಲ್ಲ, ಆದ್ದರಿಂದ ಅವರು ಈ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ದೇಶದಲ್ಲಿ ಎಲ್ಲಾ ಪಕ್ಷಗಳಿಗೆ ಸಮಾನ ಅವಕಾಶವನ್ನು ನೀಡಬೇಕು’ ಎಂದರು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಈ ಹಿಂದೆಯೂ ಜಾರಿಯಲ್ಲಿತ್ತು.ನಮ್ಮ ರಾಜ್ಯದಲ್ಲಿ ನಾವು ಈ ಹಿಂದೆ (ಲೋಕಸಭೆ ಮತ್ತು ವಿಧಾನಸಭೆ ಎರಡೂ) ಒಟ್ಟಿಗೆ ಚುನಾವಣೆಗಳನ್ನು ನಡೆಸಿದ್ದೇವೆ. ಆದರೆ ನಂತರ ಅದು ಸಾಧ್ಯವಾಗಲಿಲ್ಲ. ಏಕೆಂದರೆ ಒಂದ್ದಷ್ಟು ಸರ್ಕಾರಗಳು ಮೂರು ಅಥವಾ ಆರು ತಿಂಗಳು ಮುಂಚಿತವಾಗಿ ಚುನಾವಣೆಗೆ ಹೋಗುತ್ತವೆ. ಕೆಲವು ರಾಜ್ಯಗಳಲ್ಲಿ ಅಸೆಂಬ್ಲಿಗಳನ್ನು ವಿಸರ್ಜಿಸಲಾಯಿತು. ಈ ಎಲ್ಲಾ ವಿಷಯಗಳು ಸ್ಪಷ್ಟವಾಗಿರಬೇಕು. ಮೂರನೇ ಎರಡರಷ್ಟು ಬಹುಮತವಿಲ್ಲದ ಕೇಂದ್ರ ಸರ್ಕಾರದ ಈ ನಿರ್ಧಾರ ಸರಿಯಲ್ಲ ಎಂದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!