Wednesday, June 7, 2023

Latest Posts

ಸೂಡಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ‘ಆಪರೇಷನ್ ಕಾವೇರಿ’ ಶುರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸೂಡಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆ ತರಲು ‘ಆಪರೇಷನ್ ಕಾವೇರಿ’ ಶುರುವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್, ಸುಮಾರು 500 ಭಾರತೀಯರು ಪೋರ್ಟ್ ಸುಡಾನ್ ತಲುಪಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ಆಗಮಿಸುತ್ತಿದ್ದಾರೆ. ಭಾರತೀಯರನ್ನು ತಾಯ್ನಾಡಿಗೆ ಕರೆತರಲು ನಮ್ಮ ಹಡಗುಗಳು ಮತ್ತು ಏರ್ಕ್ರಾಪ್ಟ್ಗಳು ಸಿದ್ಧವಾಗಿವೆ. ಸುಡಾನ್ನಲ್ಲಿರುವ ನಮ್ಮ ಎಲ್ಲ ಸಹೋದರರಿಗೆ ಸಹಾಯ ಮಾಡಲು ನಾವು ಬದ್ಧವಾಗಿದ್ದೇವೆ ಎಂದು ಹೇಳಿದ್ದಾರೆ.

ಸುಡಾನ್ನಲ್ಲಿ ಯುದ್ಧ ತೀವ್ರಗೊಳ್ಳುತ್ತಿದ್ದಂತೆ ಭಾರತೀಯರು ಸೇರಿದಂತೆ 28 ರಾಷ್ಟ್ರಗಳ ಸುಮಾರು 388 ಜನರನ್ನು ಫ್ರಾನ್ಸ್ ಸೋಮವಾರ ಸ್ಛಳಾಂತರ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!