ಆಪರೇಷನ್ ‘ಮೇಘ ಚಕ್ರ’: ಕೇಂದ್ರಾಡಳಿತ, 20 ರಾಜ್ಯಗಳು ಸೇರಿ 56 ಕಡೆಯಲ್ಲಿ ಸಿಬಿಐ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಪರೇಷನ್ ‘ಮೇಘ ಚಕ್ರ’ದ ಭಾಗವಾಗಿ ಸಿಬಿಐ ಇಂದು 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 56 ಸ್ಥಳಗಳಲ್ಲಿ ಶೋಧ ನಡೆಸಿದೆ.

ಆನ್‌ಲೈನ್‌ನಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಸ್ತುಗಳ ಪ್ರಸಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಟರ್‌ಪೋಲ್ ಸಿಂಗಪುರದ ಇನ್‌ಪುಟ್‌ಗಳು ಮತ್ತು ಕ್ಲೌಡ್ ಸ್ಟೋರೇಜ್ ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಸಿಎಸ್‌ಎಎಂನ ಪೆಡ್ಲರ್‌ಗಳ ವಿರುದ್ಧ ಕಳೆದ ವರ್ಷದ ಆಪರೇಷನ್ ಕಾರ್ಬನ್ ಸಮಯದಲ್ಲಿ ಪಡೆದ ಮಾಹಿತಿಯನ್ನು ಆಧರಿಸಿ ಈ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯು ಅಪ್ರಾಪ್ತ ವಯಸ್ಕರ ಅಕ್ರಮ ಲೈಂಗಿಕ ಚಟುವಟಿಕೆಗಳ ಆಡಿಯೋ-ದೃಶ್ಯಗಳನ್ನು ಪ್ರಸಾರ ಮಾಡಲು ಪೆಡ್ಲರ್‌ಗಳು ಬಳಸುವ ಕ್ಲೌಡ್ ಸ್ಟೋರೇಜ್ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿದೆ, ಹೀಗಾಗಿ ‘ಮೇಘ ಚಕ್ರ’ ಕೋಡ್ ಅನ್ನು ಈ ಕಾರ್ಯಾಚರಣೆಗೆ ಇಡಲಾಗಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಬಿಐ ಶನಿವಾರ 20 ರಾಜ್ಯಗಳಲ್ಲಿ ದಾಳಿ ನಡೆಸಿದೆ. ಸಿಬಿಐ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಕೇಂದ್ರಾಡಳಿತ ಪ್ರದೇಶಗಳು ಮತ್ತು 20 ರಾಜ್ಯಗಳು ಸೇರಿದಂತೆ 56 ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದೆ.

ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಮಹಾರಾಷ್ಟ್ರ, ಗುಜರಾತ್, ಗೋವಾ, ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ದಾಳಿ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!