ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾದಕ ದ್ರವ್ಯ ನಿಗ್ರಹ ಸಂಸ್ಥೆ ಜಂಟಿ ಕಾರ್ಯಾಚರಣೆ ನಡೆಸಿ ಗುಜರಾತ್ ಕರಾವಳಿಯ ಭಾರತೀಯ ಪ್ರಾದೇಶಿಕ ಜಲಪ್ರದೇಶದಿಂದ ಸುಮಾರು 700 ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದು, ಜೊತೆಗೆ ಎಂಟು ಇರಾನ್ ಪ್ರಜೆಗಳನ್ನು ಬಂಧಿಸಿದೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ‘ಸಾಗರ್ ಮಂಥನ್ – 4’ ಎಂಬ ಹೆಸರಿನಡಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಇದು ಕಡಲ ಗಸ್ತು ಸ್ವತ್ತುಗಳನ್ನು ಸಜ್ಜುಗೊಳಿಸುವ ಮೂಲಕ ನೌಕಾಪಡೆಯು ಹಡಗನ್ನು ಗುರುತಿಸಿ ವಶಕ್ಕೆ ಪಡೆದಿದೆ.
ಕಾರ್ಯಾಚರಣೆ ವೇಳೆ ಸುಮಾರು 700 ಕೆಜಿಯಷ್ಟು ಮೆಥಾಂಫೆಟಮೈನ್‌ನ ಬೃಹತ್ ಸಾಗಾಣೆಯನ್ನು ಭಾರತೀಯ ಜಲಗಡಿಯಲ್ಲಿ ತಡೆಯಲಾಯಿತು. ಈ ಕಾರ್ಯಾಚರಣೆಯ ಸಂದರ್ಭ,ಇರಾನಿಯನ್ನರು ಎಂದು ಹೇಳಿಕೊಳ್ಳುವ ಎಂಟು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು NCB ತಿಳಿಸಿದೆ.
ಎನ್‌ಸಿಬಿ, ನೌಕಾಪಡೆ ಮತ್ತು ಗುಜರಾತ್ ಪೊಲೀಸ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಕಾರ್ಯಾಚರಣೆಯು ದೂರದೃಷ್ಟಿ, ಸರ್ಕಾರದ ಬದ್ಧತೆ ಮತ್ತು ಅದನ್ನು ಸಾಧಿಸುವಲ್ಲಿ ನಮ್ಮ ಏಜೆನ್ಸಿಗಳ ನಡುವಿನ ತಡೆರಹಿತ ಸಮನ್ವಯಕ್ಕೆ ಒಂದು ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.