ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನೆ ಪಾಕ್ ವಿರುದ್ಧ ನಡೆಸಿದ್ದ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಕುರಿತು ರಕ್ಷಣಾ ಪಡೆಗಳ ಮುಖ್ಯಸ್ಥರು (ಸಿಡಿಎಸ್) ಮತ್ತು ಮೂರು ಪಡೆಗಳ ಮುಖ್ಯಸ್ಥರು ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರ ವಿವರಣೆ ನೀಡಿದರು.
ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಏರ್ ಚೀಫ್ ಮಾರ್ಷಲ್ ಎ ಪಿ ಸಿಂಗ್ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರೊಂದಿಗೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಕಾರ್ಯಾಚರಣೆಯ ಕುರಿತು ಮಾಹಿತಿ ನೀಡಿದರು.
ಭಾರತೀಯ ಸಶಸ್ತ್ರ ಪಡೆಗಳ ವೃತ್ತಿಪರತೆ, ಧೈರ್ಯ ಮತ್ತು ತ್ವರಿತ ಕ್ರಮಕ್ಕಾಗಿ ರಾಷ್ಟ್ರಪತಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
‘ಭಯೋತ್ಪಾದನೆಯ ವಿರುದ್ಧ ಭಾರತದ ಪ್ರತಿಕ್ರಿಯೆಯನ್ನು ಅದ್ಭುತ ಯಶಸ್ಸಿಗೆ ಕಾರಣವಾದ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಸಮರ್ಪಣೆಯನ್ನು ರಾಷ್ಟ್ರಪತಿಗಳು ಶ್ಲಾಘಿಸಿದರು’ ಎಂದು ರಾಷ್ಟ್ರಪತಿ ಭವನ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.