‘ಆಪರೇಷನ್ ಸಿಂಧೂರ’ ಇಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಕೇಂದ್ರ ಸರ್ಕಾರವು ಸರ್ವಪಕ್ಷ ಸಭೆ ಕರೆದಿದ್ದು, ಆಪರೇಷನ್ ಸಿಂಧೂರ ಕುರಿತಾದ ಬೆಳವಣಿಗೆಗಳ ಬಗ್ಗೆ ವಿವರಿಸಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಇತರ ರಾಜಕೀಯ ಪಕ್ಷಗಳ ನಾಯಕರಿಗೆ ಮಾಹಿತಿ ನೀಡಲಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಆಪರೇಷನ್ ಸಿಂಧೂರ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ತಾಣಗಳನ್ನು ನಾಶಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸುತ್ತಿದೆ.

ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಸಂಸತ್ತಿನ ಗ್ರಂಥಾಲಯ ಕಟ್ಟಡದ ಸಂಸತ್ ಸಂಕೀರ್ಣದಲ್ಲಿರುವ ಸಮಿತಿ ಕೊಠಡಿಯಲ್ಲಿ ಸರ್ವಪಕ್ಷ ನಾಯಕರ ಸಭೆ ನಡೆಯಲಿದೆ. ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು Xನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ದಾಳಿಯ ಕುರಿತಂತೆ ವಿವರಣೆ ನೀಡಿದ್ದರು.

ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್​​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬುಧವಾರ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!