August 6, 2026
Thursday, August 6, 2026
spot_img

ಆಪರೇಷನ್ ಸಿಂದೂರ ವಿವಾದ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಅಸ್ತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಪರೇಷನ್ ಸಿಂದೂರ ಕುರಿತು ಸಂಸತ್ತಿನಲ್ಲಿ ನೀಡಿದ ಹೇಳಿಕೆಯನ್ನು ಕೇಂದ್ರವಾಗಿಸಿಕೊಂಡು ಕಾಂಗ್ರೆಸ್ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ರಾಜಕೀಯ ವಿವಾದ ಆರಂಭವಾಗಿದೆ. ಯಾವುದೇ ಭಾರತೀಯ ಸೈನಿಕರು ಸಾವನ್ನಪ್ಪಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದರೂ, ನಂತರ ಆರು ಯೋಧರು ಹುತಾತ್ಮರಾಗಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಶ್ನೆ ಎತ್ತಿದೆ.

ಹಕ್ಕುಚ್ಯುತಿ ಕ್ರಮಕ್ಕೆ ಮನವಿ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್, ರಕ್ಷಣಾ ಸಚಿವರು ಸದನವನ್ನು ದಾರಿತಪ್ಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನಿಯಮ 223ರ ಅಡಿಯಲ್ಲಿ ಹಕ್ಕುಚ್ಯುತಿ ಕ್ರಮ ಆರಂಭಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:

ಸರ್ಕಾರದ ಅಧಿಕೃತ ಮಾಹಿತಿ

ಜೂನ್ 26ರಂದು ಸರ್ಕಾರ ಬಿಡುಗಡೆ ಮಾಡಿದ ಮಾಹಿತಿಯಲ್ಲಿ ಆಪರೇಷನ್ ಸಿಂದೂರ ವೇಳೆ ಆರು ಸಶಸ್ತ್ರ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಲಾಗಿತ್ತು. ಇದೇ ವಿಷಯವನ್ನು ಉಲ್ಲೇಖಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಟೀಕೆ

ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಕೆ.ಸಿ. ವೇಣುಗೋಪಾಲ್, ಸೈನಿಕರ ತ್ಯಾಗದ ವಿಚಾರದಲ್ಲಿ ದೇಶದ ಜನತೆಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬೆಳವಣಿಗೆಯಿಂದ ಆಪರೇಷನ್ ಸಿಂಧೂರ್ ಕುರಿತು ರಾಜಕೀಯ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !