ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಆಪರೇಷನ್ ಸಿಂದೂರ’ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆ ಯಶಸ್ವಿಯಾಗಿ ಸೇಡು ತೀರಿಸಿಕೊಂಡಿದದೆ.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ತುರ್ತು ಆದೇಶ ಹೊರಡಿಸಿದೆ. ರಾಜ್ಯದಲ್ಲಿರುವ ಎಲ್ಲಾ ಅಣೆಕಟ್ಟುಗಳಿಗೆ ಬಿಗಿ ಭದ್ರತೆ ನೀಡುವಂತೆ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಸತ್ಯಮೂರ್ತಿ ಬಿ.ಕುಲಕರ್ಣಿ ಆದೇಶ ಹೊರಡಿಸಿದ್ದಾರೆ.
ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯಲ್ಲಿ ಬರುವ ಅಣೆಕಟ್ಟುಗಳಿಗೆ ಭದ್ರತೆ ನೀಡಿ ಆದೇಶ ಬೆನ್ನಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ. ಅಲ್ಲದೇ ಒಂದು ವೇಳೆ ಭದ್ರತೆಯಲ್ಲಿ ಯಾವುದೇ ದೋಷ ಕಂಡುಬಂದರೆ, ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳೇ ಹೊಣೆಗಾರರು ಎಂದು ರಾಜ್ಯದ 17 ಅಣೆಕಟ್ಟುಗಳ ಮುಖ್ಯ ಎಂಜಿನಿಯರ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಲಾಗಿದೆ.