ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ್ ಪ್ರಧಾನಿ ಮೋದಿಯವರ ದೃಢ ರಾಜಕೀಯ ಇಚ್ಛಾಶಕ್ತಿ, ವಿವಿಧ ಏಜೆನ್ಸಿಗಳ ನಿಖರವಾದ ಗುಪ್ತಚರ ಸಂಗ್ರಹಣೆ ಮತ್ತು ದೇಶದ ಸಶಸ್ತ್ರ ಪಡೆಗಳ ಸಾಟಿಯಿಲ್ಲದ ದಾಳಿಯ ಸಾಮರ್ಥ್ಯದ ಪ್ರತಿಬಿಂಬ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ದೆಹಲಿಯಲ್ಲಿ ವಿವಿಧ ಸಂಸ್ಥೆಗಳ ನಡುವೆ ಗುಪ್ತಚರ ಹಂಚಿಕೆಗಾಗಿ ನವೀಕರಿಸಿದ ಬಹು ಸಂಸ್ಥೆ ಕೇಂದ್ರವನ್ನು ಉದ್ಘಾಟಿಸಿದ ಮಾತನಾಡಿದರು.
26/11 ಮುಂಬೈ ಭಯೋತ್ಪಾದಕ ದಾಳಿಯ ನಂತರ ಕಾನೂನು ಜಾರಿಯಲ್ಲಿ ತೊಡಗಿರುವ ವಿವಿಧ ಪಾಲುದಾರರಲ್ಲಿ ಸಮಯೋಚಿತ ಮಾಹಿತಿಗಳನ್ನು ಹಂಚಿಕೊಳ್ಳುವ ಉದ್ದೇಶದಿಂದ ಗುಪ್ತಚರ ಬ್ಯೂರೋದ ಅಡಿಯಲ್ಲಿ ಬಹು ಏಜೆನ್ಸಿ ಕೇಂದ್ರವನ್ನು ರಚಿಸಲಾಯಿತು ಎಂದರು.
ಆಪರೇಷನ್ ಸಿಂಧೂರ್ ಭಯೋತ್ಪಾದನೆಯ ವಿರುದ್ಧ ಭಾರತದ ಹೊಸ ನೀತಿ ಮತ್ತು ನ್ಯಾಯಕ್ಕಾಗಿ ದೇಶದ ಅಚಲ ಪ್ರತಿಜ್ಞೆ ಎಂದು ಮೋದಿ ಹೇಳಿದ್ದರು. ಪಾಕಿಸ್ತಾನದ ವಿರುದ್ಧದ ನಮ್ಮ ಕಾರ್ಯಾಚರಣೆಗಳನ್ನು ಮಾತ್ರ ಸ್ಥಗಿತಗೊಳಿಸಿದ್ದೇವೆ. ನಮ್ಮ ಮುಂದಿನ ಹೆಜ್ಜೆ ಅವರ ನಡವಳಿಕೆಯನ್ನು ಅವಲಂಬಿಸಿರುತ್ತದೆ ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು.