ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನೆ ʻಆಪರೇಷನ್ ಸಿಂಧೂರʼ ಹೆಸರಿನ ಮೂಲಕ ಪಾಕ್ ಉಗ್ರ ನೆಲೆಗಳ ಮೇಲೆ ನಡೆಸಿದ ಪ್ರತೀಕಾರದ ದಾಳಿಯಲ್ಲಿ 31 ಮಂದಿ ಸಾವನ್ನಪ್ಪಿ, 46 ಮಂದಿ ಗಾಯಗೊಂಡಿರುವುದಾಗಿ ತಿಳಿಸಿ, ಈ ಸಾವು, ನೋವಿನ ಹೊಣೆ ಪಾಕ್ ಸೇನೆ ಹೊತ್ತುಕೊಂಡಿದೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಿರಬಹುದು ಎಂದು ಪಾಕ್ ಸೇನಾ ವಕ್ತಾರರು ತಿಳಿಸಿರುವುದರಿಂದ ಈ ಬಗ್ಗೆ ಹೆಚ್ಚಿನ ವರದಿ ತಿಳಿದು ಬರಬೇಕಿದೆ.