ಹೊಸದಿಗಂತ ಡಿಜಿಟಲ್ ಡೆಸ್ಕ್:
ಟ್ರಿಪ್‌ನಲ್ಲಿ ಎಂಜಾಯ್ ಮಾಡುತ್ತಿದ್ದ ಭಾರತೀಯರ ಬಳಿ ಬಂದು, ಪ್ಯಾಂಟ್ ಬಿಚ್ಚಿಸಿ ಹಿಂದುಗಳನ್ನು ಮಾತ್ರ ಕೊಂದಿದ್ದ ಉಗ್ರರ ಮೇಲೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ.
26 ಅಮಾಯಕ ಹೆಣ್ಣುಮಕ್ಕಳ ಕುಂಕುಮ ಅಳಿಸಿದ್ದವರ ಸದೆಬಡಿಯಲು ಭಾರತ ಆಪರೇಷನ್ ಸಿಂಧೂರ ಆರಂಭಿಸಿದ್ದು, ಪಾಕ್ ನಡುಗಿದೆ.
ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ. ಸಿಂಧೂರ ಅಳಿಸಿದ ಉಗ್ರರು ಮತ್ತು ಪಾಕ್ ವಿರುದ್ಧ ಕೈಗೊಂಡ ಅತೀ ದೊಡ್ಡ ಮಿಲಿಟರಿ ಕಾರ್ಯಾಚರಣೆಯೇ ಈ ‘ಆಪರೇಷನ್ ಸಿಂಧೂರ್’ ಆಗಿದೆ.
ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ‘ಆಪರೇಷನ್ ಸಿಂಧೂರ್’ ಆರಂಭಿಸಿವೆ. ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿರುವ ರಕ್ಷಣಾ ಇಲಾಖೆ, ಭಯೋತ್ಪಾದಕ ಅಡಗುತಾಣಗಳನ್ನು ಗರಿಯಾಗಿಸಿಕೊಂಡು 9 ಕಡೆಗಳಲ್ಲಿ ದಾಳಿ ಮಾಡಲಾಗಿದೆ.
ಪಾಕಿಸ್ತಾನದ ಮಿಲಿಟರಿ ಪಡೆಯನ್ನು ಗರಿಯಾಗಿಸಿಲ್ಲ. ಜೊತೆಗೆ ಸಾರ್ವಜನಿಕ ಸ್ಥಳಗಳ ಮೇಲೆಯೂ ದಾಳಿ ಮಾಡಿಲ್ಲ. ನಮ್ಮ ಟಾರ್ಗೆಟ್ ಭಯೋತ್ಪಾದಕರ ವಿರುದ್ಧ. ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ನಾವು ಈ ಹೆಜ್ಜೆಯನ್ನಿಟ್ಟಿದ್ದೇವೆ ಎಂದು ತಿಳಿಸಿದೆ.