4ದಿನ ಕಳೆದರೂ ಕೊಳವೆ ಬಾವಿಗೆ ಬಿದ್ದ ಬಾಲಕನ ಸುಳಿವಿಲ್ಲ: ಮುಂದುವರಿದ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಡಿಸೆಂಬರ್ 6 ರಂದು ಬೇತುಲ್ ಜಿಲ್ಲೆಯ ಮಾಂಡವಿ ಗ್ರಾಮದಲ್ಲಿ 55 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಬಾಲಕನನ್ನು ರಕ್ಷಿಸುವ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ತನ್ಮಯ್ ಸಾಹು ಎಂಬ ಬಾಲಕ ಡಿಸೆಂಬರ್ 6 ರಂದು ಸಂಜೆ 5 ಗಂಟೆ ಸುಮಾರಿಗೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬೋರ್‌ವೆಲ್‌ಗೆ ಬಿದ್ದಿದ್ದಾನೆ.

ಬೆತುಲ್ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಶ್ಯಾಮೇಂದ್ರ ಜೈಸ್ವಾಲ್ ಮಾತನಾಡಿ ಬೋರ್‌ವೆಲ್‌ಗೆ ಬಿದ್ದ ಎಂಟು ವರ್ಷದ ಬಾಲಕನ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. 33 ಅಡಿ ಆಳ ತೆಗೆಯಲಾಗಿದೆ ಎಂದಿದ್ದಾರೆ. ನಮಗೆ 45 ಅಡಿ ತಲುಪಿ ನಂತರ ಸುರಂಗ ತೋಡುವ ಗುರಿ ಇದೆ. ದಾರಿಯಲ್ಲಿ ಗಟ್ಟಿಯಾದ ಕಲ್ಲುಗಳಿರುವುದರಿಂದ ಸ್ವಲ್ಪ ಸಮಯ ಹಿಡಿಯಬಹುದು. ಆದರೆ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರಬಹುದು ಯಾಕೆಂದರೆ ಮಗುವಿನಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಸಿಗುತ್ತಿಲ್ಲ. ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದರು.

ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಗೃಹರಕ್ಷಕ ದಳ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಪ್ರಗತಿಯಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!